PM Kisan ಯೋಜನೆಯ 24ನೇ ಕಂತಿನ ಹಣ ಇಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
ದೇಶದ ರೈತರಿಗೆ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಗಲಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣ ಇಂದು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಬನಸ್ಕಾಂಠ ಜಿಲ್ಲೆಯ ಭಿಲ್ಡಿಯಲ್ಲಿ ಬೆಳಗ್ಗೆ 10 ಗಂಟೆಗೆ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಮೂಲಕ ದೇಶದ 9.34 ಕೋಟಿಗೂ ಅಧಿಕ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಪಾಯಿ ನೇರವಾಗಿ ಜಮೆಯಾಗಲಿದೆ.
ಒಟ್ಟು 18,690 ಕೋಟಿ ರೂಪಾಯಿಗೂ ಅಧಿಕ ಮೊತ್ತ ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ.