ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದಲ್ಲಿ KSRTC ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಕಾರವಾರ: KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.
ಬಸ್–ಲಾರಿ ನಡುವೆ ಮುಖಾಮುಖಿ ಡಿಕ್ಕಿ
ಕುಮಟಾದಿಂದ ಅಂಕೋಲಾಕ್ಕೆ ತೆರಳುತ್ತಿದ್ದ KSRTC ಬಸ್ ಹಾಗೂ ಅಂಕೋಲಾ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಬೆಳಸೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬಸ್ನಲ್ಲಿದ್ದ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ ಎಂದು ವರದಿಯಾಗಿದೆ.
10 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು
ಅಪಘಾತದಲ್ಲಿ ಗಾಯಗೊಂಡ 10 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ತನಿಖೆ ಮುಂದುವರಿದಿದೆ.