Belagavi ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಬೈಕ್‌ಗೆ KSRTC ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಬೆಳಗಾವಿ: ಬೈಕ್‌ಗೆ KSRTC ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತರನ್ನು ವಿನೋದ ಹೊಗೆನ್ನವರ (22), ಆಕಾಶ್ ಜಾಧವ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ. ಮೂವರೂ ಸವದತ್ತಿ ಪಟ್ಟಣದ ನಿವಾಸಿಗಳು ಎಂದು ತಿಳಿದುಬಂದಿದೆ..


KSRTC ಬಸ್ ಸವದತ್ತಿಯಿಂದ ಧಾರವಾಡದ ಕಡೆಗೆ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.