ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ ಸುತ್ತ ತಳ್ಳುಗಾಡಿಗಳ ಸಂಖ್ಯೆ ಹೆಚ್ಚಾಗಿದ್ದು, ಪ್ಲಾಸ್ಟಿಕ್ ಹಾಗೂ ಆಹಾರ ತ್ಯಾಜ್ಯದಿಂದ ಅಸ್ವಚ್ಛತೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಬೇಲೂರು: ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ ಸುತ್ತ ತಳ್ಳುಗಾಡಿಗಳ ಸಂಖ್ಯೆ ಹೆಚ್ಚಾಗಿದ್ದು, ಅಸ್ವಚ್ಛತೆ ಹಾಗೂ ಪ್ರವಾಸಿಗರ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ದೇಗುಲದ ಮೆಟ್ಟಿಲುಗಳ ಬಳಿ ಚರ್ಮುರಿ, ಪಾನಿಪುರಿ, ಗೋಬಿ ಸೇರಿದಂತೆ ಹಲವು ತಿಂಡಿ ಗಾಡಿಗಳು ಸಾಲುಗಟ್ಟಿ ನಿಂತಿದ್ದು, ಪ್ಲಾಸ್ಟಿಕ್ ಹಾಗೂ ಆಹಾರ ತ್ಯಾಜ್ಯದಿಂದ ಪರಿಸರ ಹದಗೆಡುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಳ್ಳುಗಾಡಿಗಳನ್ನು ನಿಯಂತ್ರಿಸಿ, ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಕಲ್ಪಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ, ಕ್ರಮಕ್ಕೆ ವಿಳಂಬವಾಗುತ್ತಿದೆ ಎನ್ನಲಾಗಿದೆ.
ಐತಿಹಾಸಿಕ ಸ್ಮಾರಕದ ಸೌಂದರ್ಯ ಹಾಗೂ ಸ್ವಚ್ಛತೆ ಕಾಪಾಡುವುದರ ಜೊತೆಗೆ ವ್ಯಾಪಾರಿಗಳ ಜೀವನೋಪಾಯಕ್ಕೂ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.