ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. 

ಬೆಂಗಳೂರಿನ ಕೋರಮಂಗಲದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಉಂಟಾಗಿದೆ.

ಹೊಗೆಯನ್ನು ಗಮನಿಸಿದ ಚಾಲಕ ಮತ್ತು ನಿರ್ವಾಹಕರು ತಕ್ಷಣ ಬಸ್ ನಿಲ್ಲಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಹೀಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದಂತಾಗಿದೆ.

ಮೊದಲಿಗೆ ಕಾಣಿಸಿಕೊಂಡ ಹೊಗೆ ಕೆಲವೇ ಕ್ಷಣಗಳಲ್ಲಿ ಬಸ್‌ನ್ನು ಆವರಿಸಿಕೊಂಡಿದೆ ಎಂದು ವರದಿಯಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.