Bengaluru : ಅತ್ತಿಬೆಲೆ ಗಡಿಭಾಗದ ಹೆಚ್ಪಿ ಪೆಟ್ರೋಲ್ ಬಂಕ್ಗೆ ಜಾಗ್ವಾರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಹಾಗೂ ಪೆಟ್ರೋಲ್ ಪಂಪ್ಗೆ ಬೆಂಕಿ ಹೊತ್ತಿಕೊಂಡಿದೆ.
Bengaluru : ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಹೆಚ್ಪಿ ಪೆಟ್ರೋಲ್ ಬಂಕ್ಗೆ ಜಾಗ್ವಾರ್ ಕಾರು ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಸಂಜಯ್ ಎಂಬಾತ ಯುವತಿಯೊಬ್ಬಳ ಜೊತೆ ಕಾರಿನಲ್ಲಿ ಬಂದಿದ್ದು, ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಚಾಲನೆ ಮಾಡುತ್ತಿದ್ದ ವೇಳೆ ಬಂಕ್ ಸಿಬ್ಬಂದಿ ಗುಡ್ಡು ಕುಮಾರ್ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಬಳಿಕ ನಿಯಂತ್ರಣ ತಪ್ಪಿದ ಕಾರು ಪೆಟ್ರೋಲ್ ಪಂಪ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಿಡಿ ಹೊತ್ತಿಕೊಂಡು ಕಾರು ಹಾಗೂ ಪೆಟ್ರೋಲ್ ಪಂಪ್ಗೆ ಬೆಂಕಿ ವ್ಯಾಪಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಯುವಕ ಹಾಗೂ ಯುವತಿ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.
ಇನ್ನು ಕಾರು ಡಿಕ್ಕಿಯಿಂದ ಬಂಕ್ ಸಿಬ್ಬಂದಿ ಗುಡ್ಡು ಕುಮಾರ್ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ