Bengaluru Footpath Encroachment: ಫುಟ್‌ಪಾತ್ ಮರು ಒತ್ತುವರಿ ಮಾಡಿದ್ರೆ FIR; ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ..

ತೆರವುಗೊಳಿಸಿದ್ದ ಫುಟ್‌ಪಾತ್‌ಗಳನ್ನು ಮತ್ತೆ ಒತ್ತುವರಿ ಮಾಡಿ ವ್ಯಾಪಾರ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ತೆರವು ಕಾರ್ಯಾಚರಣೆ ಬಳಿಕ ಅದೇ ಜಾಗದಲ್ಲಿ ಮತ್ತೆ ವ್ಯಾಪಾರಕ್ಕೆ ಮುಂದಾದರೆ, ವ್ಯಾಪಾರಿಗಳ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸುವುದರ ಜೊತೆಗೆ FIR ದಾಖಲಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಬೀದಿಬದಿ ವ್ಯಾಪಾರಿಗಳಿಂದ ಪಾದಚಾರಿ ಮಾರ್ಗಗಳು ಮತ್ತೆ ಒತ್ತುವರಿಯಾಗದಂತೆ ನಿರಂತರ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ತೆರವುಗೊಳಿಸಿದ ಪ್ರದೇಶಗಳಲ್ಲಿ ಮತ್ತೆ ಒತ್ತುವರಿ ಕಂಡುಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.


ಫುಟ್‌ಪಾತ್‌ಗಳು ಸಾರ್ವಜನಿಕರ ಸುಗಮ ಸಂಚಾರಕ್ಕೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಹಾಗೂ ತೆರವು ಕಾರ್ಯಾಚರಣೆ ಬಳಿಕ ಮರು ಒತ್ತುವರಿ ಆಗದಂತೆ ಮೇಲ್ವಿಚಾರಣೆ ನಡೆಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ವಿರುದ್ಧ ವಸ್ತು ಜಪ್ತಿ, ದಂಡ ಹಾಗೂ FIR ಸೇರಿದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.