ಬೀದರ್ನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ನಿವೃತ್ತ ಕೃಷಿ ಇಲಾಖೆಯ ಆಡಳಿತಾಧಿಕಾರಿ ಮಾಣೀಕ್ ಶೆರಿಕಾರ್ ಅವರಿಗೆ ಸೇರಿದ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಕೃಷಿ ಇಲಾಖೆಯ ಆಡಳಿತಾಧಿಕಾರಿಗೆ ಸೇರಿದ ಮೂರು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ನಿವೃತ್ತ ಅಧಿಕಾರಿ ಮಾಣೀಕ್ ಶೆರಿಕಾರ್ ಅವರಿಗೆ ಸೇರಿದ ಬೀದರ್ ನಗರದ ಹಕ್ಕ್ ಕಾಲೋನಿ ನಿವಾಸ, ಹುಮ್ನಾಬಾದ್ನಲ್ಲಿರುವ ನಿವಾಸ ಹಾಗೂ ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮದ ಬಳಿಯ ಫಾರ್ಮ್ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಮೂರು ಸ್ಥಳಗಳಲ್ಲೂ ದಾಖಲೆಗಳು ಹಾಗೂ ಆಸ್ತಿ ವಿವರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರೆ ಮಹತ್ವದ ಮಾಹಿತಿಗಾಗಿ ಲೋಕಾಯುಕ್ತ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.