Bigg Boss Kannada 13: ಕಾಲು ನೋವು ಹಾಗೂ ಊತ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ನಿರ್ದೇಶಕ ಓಂ ಪ್ರಕಾಶ್ ರಾವ್, ಆರೋಗ್ಯದ ಕಾರಣ ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರಬಂದಿದ್ದಾರೆ.
ಕಾಲು ನೋವು ಹಾಗೂ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಓಂ ಪ್ರಕಾಶ್ ರಾವ್ ಅವರನ್ನು ಬಿಗ್ ಬಾಸ್ ಮನೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಯ ಹಿನ್ನೆಲೆಯಲ್ಲಿ ಅವರು ಬಿಗ್ ಬಾಸ್ ಮನೆಯಲ್ಲಿ ತಮ್ಮ ಆಟವನ್ನು ಅರ್ಧಕ್ಕೆ ನಿಲ್ಲಿಸಿ ಹೊರಬಂದಿದ್ದಾರೆ.
ಸೋಮವಾರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸಿಬ್ಬಂದಿ ಅವರನ್ನು ಬಿಡದಿಯ ಕಾಡುಮನೆ ಎಸ್ಟೇಟ್ ಬಳಿ ಇರುವ ಆರಾಧ್ಯ ಆಸ್ಪತ್ರೆಗೆ ದಾಖಲಿಸಿದ್ದರು.
ಈ ಹಿಂದೆ ಅಪಘಾತದಲ್ಲಿ ಓಂ ಪ್ರಕಾಶ್ ರಾವ್ ಅವರ ಕಾಲಿಗೆ ಬಲವಾದ ಪೆಟ್ಟಾಗಿತ್ತು. ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಮನೆಯಲ್ಲಿ ವಿಶ್ರಾಂತಿ ಇಲ್ಲದೆ ಟಾಸ್ಕ್ಗಳಲ್ಲಿ ಭಾಗವಹಿಸಿದ ಪರಿಣಾಮ ಕಾಲಿನ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ.
ಓಂ ಪ್ರಕಾಶ್ ರಾವ್ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ವಿಚಾರವನ್ನು ಕಲರ್ಸ್ ಕನ್ನಡ ವಾಹಿನಿ ಅಧಿಕೃತವಾಗಿ ಪೋಸ್ಟ್ ಮೂಲಕ ತಿಳಿಸಿದೆ.
ಇನ್ನು ಓಂ ಪ್ರಕಾಶ್ ರಾವ್ ಅವರಿಗೆ ಬಿಗ್ ಬಾಸ್ ಕನ್ನಡ ಸೀಸನ್ 4ರಲ್ಲೂ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು.
ಆಗ ಅನಾರೋಗ್ಯದ ಕಾರಣ ಅವರು ತಮ್ಮ ಜರ್ನಿಯನ್ನು ಅರ್ಧಕ್ಕೆ ನಿಲ್ಲಿಸಿದ್ದರು. ಇದು ಅವರಿಗೆ ಸೆಕೆಂಡ್ ಚಾನ್ಸ್ ಎಂದು ಕಿಚ್ಚ ಸುದೀಪ್ ಹೇಳಿದ್ದರು.
ಆದರೆ ಇದೀಗ ಸೀಸನ್ 13ರಲ್ಲೂ ಅನಾರೋಗ್ಯದ ಕಾರಣ ಓಂ ಪ್ರಕಾಶ್ ರಾವ್ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ.