ಕರ್ನಾಟಕದಲ್ಲಿ ಬಸ್ ಟಿಕೆಟ್ ದರ ಏರಿಕೆ ಕುರಿತು ತಜ್ಞರ ಸಮಿತಿ ಇಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ಬೆಂಗಳೂರು: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಬಸ್ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಯಿದೆ. ಬಸ್ ಟಿಕೆಟ್ ದರ ಹೆಚ್ಚಳ ಕುರಿತು ರಚಿಸಲಾಗಿದ್ದ ತಜ್ಞರ ಸಮಿತಿ ಇಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.
ನಿವೃತ್ತ ಐಎಎಸ್ ಅಧಿಕಾರಿ ಅತಯಲ್ ತಿವಾರಿ ನೇತೃತ್ವದ ಸಮಿತಿ ಎರಡು ತಿಂಗಳ ಕಾಲ ಅಧ್ಯಯನ ನಡೆಸಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಹಾಗೂ ಟಿಕೆಟ್ ದರ ಹೆಚ್ಚಳದ ಬಗ್ಗೆ ವರದಿ ನೀಡಲಿದೆ.
ವರದಿ ಆಧರಿಸಿ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಟಿಕೆಟ್ ದರ ಏರಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸಾರಿಗೆ ನಿಗಮಗಳು ಸುಮಾರು 40% ದರ ಏರಿಕೆಗೆ ಬೇಡಿಕೆ ಇಟ್ಟಿದ್ದರೆ, ಪ್ರಯಾಣಿಕರ ಹಿತದೃಷ್ಟಿಯಿಂದ ಶೇಕಡಾ 12ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಬಿಎಂಟಿಸಿ ಟಿಕೆಟ್ ದರದಲ್ಲಿ ಶೇಕಡಾ 15ರಿಂದ 17ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಆದರೆ ಅಂತಿಮ ದರ ಏರಿಕೆ ಸರ್ಕಾರದ ನಿರ್ಧಾರದ ಬಳಿಕವಷ್ಟೇ ಸ್ಪಷ್ಟವಾಗಲಿದೆ.