ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ಬಳಿ NH-44ರಲ್ಲಿ ಕಾರು ಮತ್ತು ಬೊಲೆರೊ ನಡುವೆ ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಕಾರು ಮತ್ತು ಬೊಲೆರೊ ವಾಹನದ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರದತ್ತ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಮೃತರ ಗುರುತು, ಅಪಘಾತದ ನಿಖರ ಕಾರಣ ಹಾಗೂ ಪೊಲೀಸ್ ತನಿಖೆಯ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.