ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಸಮೀಪ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. .


ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮರಗಲ್ ಸಮೀಪ ನಡೆದಿದೆ.


ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಾರೆ. ಮೃತರು ಪುಣೆ ಮೂಲದ ಪ್ರಯಾಣಿಕರು ಎಂದು ತಿಳಿದುಬಂದಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ.


ಘಟನೆಯಲ್ಲಿ ಗಾಯಗೊಂಡವರನ್ನು ಬಂಗಾರಪೇಟೆ ಹಾಗೂ ಕೋಲಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.