Chamarajanagar ದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಆನೆ ದಾಳಿಗೆ ರೈತ ಶಿವಕುಮಾರ್ ಮೃತಪಟ್ಟಿದ್ದಾರೆ.
Chamarajanagar : ಆನೆ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದ ರೈತ ಶಿವಕುಮಾರ್ ಎಂದು ಗುರುತಿಸಲಾಗಿದೆ.
ನಸುಕಿನ ಜಾವ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದ್ದು, ಏಕಾಏಕಿ ಆನೆ ದಾಳಿ ನಡೆಸಿದ ಪರಿಣಾಮ ಶಿವಕುಮಾರ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಮಾಹಿತಿ ತಿಳಿದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾನವ–ವನ್ಯಜೀವಿ ಸಂಘರ್ಷದ ಹಿನ್ನೆಲೆಯಲ್ಲಿ ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.