Chikkaballapura ತಾಲೂಕಿನ ಕುಡುವತಿ ಗ್ರಾಮದಲ್ಲಿ ಬಾವಿಗೆ ಬಿದ್ದು ಕಲ್ಪನ (39) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಬಾವಿಗೆ ಬಿದ್ದು ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುಡುವತಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಲ್ಪನ (39) ಎಂದು ಗುರುತಿಸಲಾಗಿದೆ. ಸುಮಾರು 20 ವರ್ಷಗಳ ಹಿಂದೆ ಕುಡುವತಿ ಗ್ರಾಮದ ತಮ್ಮೇಗೌಡ ಎಂಬುವವರನ್ನು ಕಲ್ಪನ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕಲ್ಪನ ಅವರು ಕುಡುವತಿ ಗ್ರಾಮದ ತಮ್ಮ ತವರು ಮನೆಯಲ್ಲಿದ್ದರು. ಈ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆ ಅವರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮಾಹಿತಿ ತಿಳಿದು ನಂದಿಗಿರಿಧಾಮ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.