Chikkanayakanahalli : ಹುಚ್ಚನಹಳ್ಳಿ ಗ್ರಾಮದಲ್ಲಿ 16 ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮನ್ವಿತಾ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ತುಮಕೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಚ್ಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು 16 ವರ್ಷದ ಮನ್ವಿತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹಂದನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.