Chitradurga : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಗ್ರಾಮದ ಬಳಿ ಚಿರತೆ ದಾಳಿಗೆ 65 ವರ್ಷದ ರೈತ ರಾಮಚಂದ್ರಪ್ಪ ಮೃತಪಟ್ಟಿದ್ದಾರೆ.

Chitradurga : ಚಿರತೆ ದಾಳಿಗೆ ರೈತರೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡಚಲ್ಲೂರು ಗ್ರಾಮದ ಬಳಿ ನಡೆದಿದೆ.

ಮೃತರನ್ನು 65 ವರ್ಷದ ರೈತ ರಾಮಚಂದ್ರಪ್ಪ ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ಮನೆಯ ಸಮೀಪ ಈ ಘಟನೆ ಸಂಭವಿಸಿದ್ದು, ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ.

ಘಟನೆಯಿಂದ ದೊಡ್ಡಚಲ್ಲೂರು ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಗ್ರಾಮದಲ್ಲಿ ಚಿರತೆ ಸಂಚಾರದ ಭೀತಿ ಎದುರಾಗಿದ್ದು, ಕೂಡಲೇ ಚಿರತೆಯನ್ನು ಸೆರೆಹಿಡಿಯಲು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಬೇಕಿದೆ.