ಚಿತ್ರದುರ್ಗದ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಚಾಲಕ ಬಾಪು ಪಾಟೀಲ್ ಹಾಗೂ 14 ವರ್ಷದ ಪ್ರಯಾಣಿಕ ಗಗನ್ ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಮೃತರನ್ನು ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ ಕೂಡ್ಲಿಗಿ ಮೂಲದ ಪ್ರಯಾಣಿಕ ಗಗನ್ (14) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.