ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸೆಪ್ಟೆಂಬರ್ 19 ರಂದು ನಡೆಯಲಿರುವ ಮಹತ್ವದ ಸಭೆಯ ಹಿನ್ನೆಲೆಯಲ್ಲಿ, ಅಲ್ಲಿನ ಮೂರು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ!
ಕಸ್ತೂರಿ ರಂಗನ್ ವರದಿ ಕುರಿತು ರೈತರು ಹಾಗೂ ಸಾರ್ವಜನಿಕರ ಜೊತೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀರ್ಥಹಳ್ಳಿಗೆ ಭೇಟಿ ನೀಡುತ್ತಿದ್ದಾರೆ.
ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಯು.ಆರ್.ಅನಂತಮೂರ್ತಿ ಪ್ರೌಢಶಾಲೆ ಹಾಗೂ ಬಾಳೇಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ನೀಡಿ ತಹಶೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.