ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿ ಪ್ರದೂಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೂಷ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಜಯಲಕ್ಷ್ಮಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.
ಮಾಫಿ ಸಾಕ್ಷಿಯನ್ನು ಪರಿಗಣಿಸುವ ಅಧಿಕಾರ ಸೆಷನ್ಸ್ ನ್ಯಾಯಾಲಯಕ್ಕೆ ಇಲ್ಲ ಎಂಬ ವಾದವನ್ನು ಸುಪ್ರೀಂಕೋರ್ಟ್ ಒಪ್ಪಲಿಲ್ಲ. ಈ ವಿಚಾರದಲ್ಲಿ ಹೈಕೋರ್ಟ್ನ ನಿಲುವು ಸರಿಯಾಗಿದೆ ಎಂದು ಪೀಠ ತಿಳಿಸಿದೆ.
ಇದೇ ವೇಳೆ ಮಾಫಿ ಸಾಕ್ಷಿಯ ವಿಚಾರಣೆಯ ಸಂದರ್ಭದಲ್ಲಿ ಆರೋಪಿಗಳಿಗೆ ಕ್ರಾಸ್ ಎಕ್ಸಾಮಿನೇಷನ್ ನಡೆಸುವ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಅರ್ಜಿ ವಜಾಗೊಂಡ ಬಳಿಕ ವಿಜಯಲಕ್ಷ್ಮಿ ಪರ ವಕೀಲರು ವಾದ ಮುಂದುವರಿಸಲು ಪ್ರಯತ್ನಿಸಿದರೂ, ಹೆಚ್ಚಿನ ವಾದವನ್ನು ಪೀಠ ಆಲಿಸಲಿಲ್ಲ.