ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ಆನ್ಲೈನ್ ಗೇಮ್ಗೆ ಹಣ ನೀಡುವಂತೆ ಸ್ನೇಹಿತರು ಒತ್ತಾಯಿಸಿ ಬೆದರಿಕೆ ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ದಾವಣಗೆರೆ: ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಆನ್ಲೈನ್ ಗೇಮ್ಗೆ ಹಣ ನೀಡುವಂತೆ ಸ್ನೇಹಿತರು ಒತ್ತಾಯಿಸಿ ಬೆದರಿಕೆ ಹಾಕಿದ್ದೇ ಘಟನೆಗೆ ಕಾರಣ ಎಂದು ಬಾಲಕನ ಪೋಷಕರು ಆರೋಪಿಸಿದ್ದಾರೆ.
ಮೃತ ಬಾಲಕನನ್ನು ಮನೋಜ್ ಟಿ.ಆರ್. ಎಂದು ಗುರುತಿಸಲಾಗಿದೆ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ಗೆ ಹಣ ಹಾಕುವಂತೆ ಮನೋಜ್ಗೆ ಒತ್ತಾಯಿಸಿದ್ದರು ಎನ್ನಲಾಗಿದೆ. ಹಣ ತರದಿದ್ದರೆ ಬೆದರಿಕೆ ಹಾಕಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ..
ಇದೇ ವಿಚಾರವಾಗಿ ಮನೋಜ್ ಮನೆಯಿಂದ ಸುಮಾರು 4 ಲಕ್ಷ ರೂಪಾಯಿ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ. ಮನೆಯಲ್ಲಿ ಹಣ ಕಡಿಮೆಯಾಗಿರುವುದು ಗಮನಕ್ಕೆ ಬಂದ ಬಳಿಕ ಪರಿಶೀಲಿಸಿದಾಗ ಸ್ನೇಹಿತರು ಹಣಕ್ಕಾಗಿ ಒತ್ತಾಯಿಸಿದ್ದ ವಿಚಾರ ಬೆಳಕಿಗೆ ಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಹಣಕ್ಕಾಗಿ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಗಳ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.