DAVANAGERE ತಾಲೂಕಿನ ಆರನೇಕಲ್ಲು ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿದ್ದ ಮಗನೊಬ್ಬ ತಾಯಿಯನ್ನು ಗೋಡೆಗೆ ಗುದ್ದಿ ಭೀಕರವಾಗಿ ಹತ್ಯೆಗೈದಿದ್ದಾನೆ.
ಕುಡಿದ ಮತ್ತಲ್ಲಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗನೋರ್ವನ ಕೃತ್ಯ ದಾವಣಗೆರೆ ತಾಲೂಕಿನಲ್ಲಿ ತೀವ್ರ ಆಘಾತ ಮೂಡಿಸಿದೆ!
ದಾವಣಗೆರೆ ತಾಲೂಕಿನ ಆರನೇಕಲ್ಲು ಗ್ರಾಮದಲ್ಲಿ ಈ ದಾರುಣ ಘಟನೆ ನಡೆದಿದೆ. 60 ವರ್ಷದ ಪ್ರೇಮ ಎಂಬ ದುರ್ದೈವಿ ತಾಯಿಯನ್ನು ಆಕೆಯ ಮಗ ಆನಂದ್ ಕುಡಿದ ಮತ್ತಿನಲ್ಲಿ ಗೋಡೆಗೆ ಗುದ್ದಿ ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಕೊಲೆಗೆ ನಿಖರವಾದ ಕಾರಣ ಏನು ಎಂಬುದು ಇನ್ನುಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.