‘ಪೊಗರು’ ಬಳಿಕ ಧ್ರುವ ಸರ್ಜಾ ಹಾಗೂ ನಂದಕಿಶೋರ್ ಕಾಂಬಿನೇಷನ್ ಮತ್ತೆ ಒಂದಾಗಿದ್ದು, ಚಿತ್ರಕ್ಕೆ ‘ವಸುದೈವ ಕುಟುಂಬಕಂ’ ಎಂದು ಹೆಸರಿಡಲಾಗಿದೆ.
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾದ ಘೋಷಣೆಯಾಗಿದೆ. ಚಿತ್ರಕ್ಕೆ ‘ವಸುದೈವ ಕುಟುಂಬಕಂ’ ಎಂದು ಹೆಸರಿಡಲಾಗಿದೆ.
‘ಪೊಗರು’ ಚಿತ್ರದ ಬಳಿಕ ಧ್ರುವ ಸರ್ಜಾ ಹಾಗೂ ನಂದಕಿಶೋರ್ ಅವರ ಕಾಂಬಿನೇಷನ್ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ನಂದಕಿಶೋರ್ ಇದೀಗ ನಂದ ಸುಧೀರ್ ಎಂಬ ಹೆಸರಿನಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡಬಹುದಾದ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರ ಇದಾಗಿದ್ದು, ಲವ್, ಆಕ್ಷನ್ ಹಾಗೂ ಸೆಂಟಿಮೆಂಟ್ ಸೇರಿದಂತೆ ಹಲವು ಅಂಶಗಳು ಇರಲಿವೆ ಎಂದು ಚಿತ್ರತಂಡ ತಿಳಿಸಿದೆ.
ವಿ. ಹರಿಕೃಷ್ಣ ಸಂಗೀತ, ಸತ್ಯ ಹೆಗ್ಡೆ ಛಾಯಾಗ್ರಹಣ ಹಾಗೂ ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ. ಹೆಸರಾಂತ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಚಿತ್ರದಲ್ಲಿರಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಹೊರಬರಲಿದೆ.