Doddaballapurದ ಎಂಎಸ್ಜಿಪಿ ಕಸ ವಿಂಗಡಣೆ ಘಟಕದಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ಅರಸಮ್ಮ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಿಂದ ಸಂಗ್ರಹಿಸಿದ ಕಸವನ್ನು ವಿಂಗಡಣೆ ಮಾಡುವ ಘಟಕದಲ್ಲಿ ದುರ್ಘಟನೆ ಸಂಭವಿಸಿದೆ. Doddaballapur ದ ಎಂಎಸ್ಜಿಪಿ ಘಟಕದಲ್ಲಿ ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ 45 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಮೃತರನ್ನು ಕಾಡತಿಪ್ಪೂರು ಮೂಲದ ಅರಸಮ್ಮ (45) ಎಂದು ಗುರುತಿಸಲಾಗಿದೆ. ಅವರು ಕಳೆದ ಮೂರು–ನಾಲ್ಕು ವರ್ಷಗಳಿಂದ ಈ ಘಟಕದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕೆಲಸದ ವೇಳೆ ಸಂಭವಿಸಿದ ಅವಘಡ
ಅಕ್ಟೋಬರ್ 2ರ ಬೆಳಗ್ಗೆ ಕಸ ವಿಂಗಡಣೆ ಕಾರ್ಯ ನಡೆಯುತ್ತಿದ್ದ ವೇಳೆ ಅರಸಮ್ಮ ಯಂತ್ರಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅವಘಡ ಸಂಭವಿಸಿದ ಸಂದರ್ಭ ಮತ್ತು ಕಾರಣದ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ಪರಿಶೀಲನೆಯಿಂದ ತಿಳಿದುಬರಬೇಕಿದೆ.