ಶಿವಮೊಗ್ಗ ನಗರದ ವಾದಿ-ಏ-ಹುಧಾದಲ್ಲಿ ಮನೆಯಲ್ಲಿ ಬಟ್ಟೆ ಇಸ್ತ್ರಿ ಮಾಡುವಾಗ ವಿದ್ಯುತ್ ಶಾಕ್ನಿಂದ 9ನೇ ತರಗತಿ ವಿದ್ಯಾರ್ಥಿ ಉಮರ್ ಫಾರುಕ್ (14) ಮೃತಪಟ್ಟಿರುವ ಘಟನೆ ನಡೆದಿದೆ.
ಶಿವಮೊಗ್ಗ ನಗರದ ವಾದಿ-ಏ-ಹುಧಾದಲ್ಲಿ ವಿದ್ಯುತ್ ಶಾಕ್ನಿಂದ 14 ವರ್ಷದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತನನ್ನು ಉಮರ್ ಫಾರುಕ್ ಎಂದು ಗುರುತಿಸಲಾಗಿದ್ದು, ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ವರದಿಯಾಗಿದೆ.
ಮನೆಯಲ್ಲಿ ಬಟ್ಟೆ ಇಸ್ತ್ರಿ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಅಸ್ವಸ್ಥನಾಗಿ ಬಿದ್ದಿದ್ದಾನೆ. ಕುಟುಂಬಸ್ಥರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರಾದರೂ, ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ವಿದ್ಯಾರ್ಥಿಯ ಸಾವಿನಿಂದ ಕುಟುಂಬಸ್ಥರು ದುಃಖದಲ್ಲಿದ್ದು, ಶಿಕ್ಷಕರು ಮತ್ತು ಸಹಪಾಠಿಗಳು ಸಂತಾಪ ಸೂಚಿಸಿದ್ದಾರೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.