2026ರ ಹಾಸನಾಂಬೆ ದರ್ಶನೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ.

ಹಾಸನ: 2026ರ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಭಕ್ತರಿಗೆ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಹಾಸನ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಂ ಶಿವಲಿಂಗೇಗೌಡ ಅವರು ಹಾಸನಾಂಬೆ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪೋಸ್ಟರ್ ಮತ್ತು ವೆಬ್‌ಸೈಟ್ ಬಿಡುಗಡೆ ಮಾಡಿದರು.


ಈ ಬಾರಿ ಪಾಸ್ ವ್ಯವಸ್ಥೆಯನ್ನು ಕಡಿಮೆಗೊಳಿಸಿ, ಸಾರ್ವಜನಿಕ ಭಕ್ತರಿಗೆ ದರ್ಶನದಲ್ಲಿ ಮೊದಲ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಗಣ್ಯರ ದರ್ಶನಕ್ಕೆ ಕಳೆದ ವರ್ಷದ ಮಾದರಿಯಲ್ಲಿ ಸಮಯ ನಿಗದಿ ಮಾಡುವ ಕುರಿತು ಚರ್ಚಿಸಲಾಗಿದೆ.

ಭಕ್ತರು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗದಂತೆ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಪುಟ್ಟ ಮಕ್ಕಳೊಂದಿಗೆ ಆಗಮಿಸುವ ಮಹಿಳಾ ಭಕ್ತರಿಗೆ ವಿಶೇಷ ಸರದಿ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆದಿದೆ.


ಉತ್ಸವದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳು

ಹಾಸನಾಂಬೆ ಉತ್ಸವವನ್ನು ಇಡೀ ಜಿಲ್ಲೆಯ ಜನರನ್ನು ಒಳಗೊಂಡ ಹಬ್ಬವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಾರಿ ದನಗಳ ಜಾತ್ರೆ, ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚಿಂತನೆ ನಡೆದಿದೆ.


ಉತ್ಸವದ ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಕಾಪಾಡಲಾಗುವುದು ಎಂದು ಸಚಿವ ಕೆಎಂ ಶಿವಲಿಂಗೇಗೌಡ ತಿಳಿಸಿದ್ದಾರೆ. ಯಾವುದೇ ರೀತಿಯ ದುಂದು ವೆಚ್ಚಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಎಂಟು ಗಂಟೆಗಳ ಕರ್ತವ್ಯ ವ್ಯವಸ್ಥೆ ಹಾಗೂ ಗ್ರಾಮ ಸಹಾಯಕರಿಗೆ ಗೌರವಧನ ಸೇರಿದಂತೆ ಹಲವು ಸಲಹೆಗಳು ಸಭೆಯಲ್ಲಿ ಕೇಳಿಬಂದಿವೆ.


ಉತ್ಸವಕ್ಕೆ ಡಿಸಿಎಂ ಡಿಕೆ ಶಿವಕುಮಾರ್?

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ಉತ್ಸವಕ್ಕೆ ಒಂದು ದಿನ ಆಗಮಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಅವರು ಉದ್ಘಾಟನೆ ದಿನವೇ ಆಗಮಿಸುತ್ತಾರೆಯೇ ಎಂಬುದು ಬಳಿಕ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

ಇನ್ನು ಹಾಸನಾಂಬೆ ದೇವಿಯ ಆಶೀರ್ವಾದದಿಂದ ತಮಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಕೆಎಂ ಶಿವಲಿಂಗೇಗೌಡ