Hassan  ದ ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ 67 ವರ್ಷದ ಲಕ್ಷ್ಮಮ್ಮ ಅವರ ಶವ ಪತ್ತೆಯಾಗಿದೆ. 

Hassan : ಅರಕಲಗೂಡು ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ 67 ವರ್ಷದ ವೃದ್ಧೆಯ ಶವ ಪತ್ತೆಯಾಗಿದೆ.

ಹಿರೀಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ ಮೃತ ಮಹಿಳೆ. ಶನಿವಾರ ವಿಜಯಕೊಪ್ಪಲಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.


ಅ.6ರಂದು ಪತಿ ಅಣ್ಣೇಗೌಡ ಅವರು ಪತ್ನಿ ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದರು. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ ನಾಲೆಯಲ್ಲಿ ಲಕ್ಷ್ಮಮ್ಮ ಅವರ ಶವ ಪತ್ತೆಯಾಗಿದೆ.

ಚಿನ್ನಾಭರಣಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಎಸ್‌ಪಿ ಶುಭನ್ವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.