Hassan  ದ ಚನ್ನರಾಯಪಟ್ಟಣದಲ್ಲಿ ಬೈಕ್ ಸ್ಕಿಡ್ ಆಗಿ ಹೇಮಾವತಿ ನಾಲೆಗೆ ಬಿದ್ದು ಯುವಕ ಮೃತಪಟ್ಟಿದ್ದಾರೆ.


Hassan : ಬೈಕ್ ಸ್ಕಿಡ್ ಆಗಿ ಹೇಮಾವತಿ ನಾಲೆಗೆ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತರನ್ನು ಕೆಇಬಿ ನೌಕರ ಹೇಮಂತ್ ಅಲಿಯಾಸ್ ಆಟೋ ಕುಮಾರ, 24 ಎಂದು ಗುರುತಿಸಲಾಗಿದೆ.


ನಿನ್ನೆ ಸಂಜೆ ಕಚೇರಿ ಪಕ್ಕದಲ್ಲೇ ಹಾದುಹೋಗುವ ಹೇಮಾವತಿ ನಾಲೆ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿದೆ. ಪರಿಣಾಮ ಹೇಮಂತ್ ಭಾರಿ ಪ್ರಮಾಣದಲ್ಲಿ ಹರಿಯುತ್ತಿದ್ದ ನಾಲೆಯ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೇಮಂತ್ ಅವರ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ಕೈಗೊಳ್ಳಲಿದ್ದಾರೆ.