Haveri ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ 16 ವರ್ಷದ SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

Haveri : ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯಾಭ್ಯಾಸದತ್ತ ಹೆಚ್ಚಿನ ಗಮನ ಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ ಬಳಿಕ 16 ವರ್ಷದ SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಹರ್ಷ ಮೋರೆ ಎಂದು ಗುರುತಿಸಲಾಗಿದೆ. ಹರ್ಷ SSLC ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಸಮಯ ಮೊಬೈಲ್ ಬಳಸುತ್ತಿದ್ದ ಎನ್ನಲಾಗಿದೆ.


ಈ ಹಿನ್ನೆಲೆಯಲ್ಲಿ ಪೋಷಕರು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಓದಿನತ್ತ ಗಮನ ಹರಿಸುವಂತೆ ತಿಳಿಹೇಳಿದ್ದರು. ಬಳಿಕ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.


ಘಟನೆ ಕುರಿತು ಮಾಹಿತಿ ತಿಳಿದು ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.