ಹುಬ್ಬಳ್ಳಿ–ಗದಗ ಬೈಪಾಸ್ನಲ್ಲಿ ಬೈಕ್ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುಬ್ಬಳ್ಳಿ–ಗದಗ ಬೈಪಾಸ್ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ಗೆ ಎದುರಿನಿಂದ ಬಂದ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ಜಯರಾಜನಗರ ನಿವಾಸಿಗಳಾದ ರಜನಿ ತಿಕಲಾ ಮತ್ತು ಸುಕುಮಾರ ತಿಕಲಾ ಎಂದು ಗುರುತಿಸಲಾಗಿದೆ. ರಜನಿ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ರಜನಿ ಅವರನ್ನು ಪತಿ ಸುಕುಮಾರ ಬೈಕ್ನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹುಬ್ಬಳ್ಳಿ–ಗದಗ ಬೈಪಾಸ್ನಲ್ಲಿ ಎದುರಿನಿಂದ ಬಂದ ಕೊರಿಯರ್ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ದಂಪತಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೂರ್ವ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.