ಬೇಲೂರಿನಲ್ಲಿ ಕರವೇ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಜಾನಪದ ಮತ್ತು ಭಾವಗೀತೆ ಸ್ಪರ್ಧೆ ಆಯೋಜಿಸಲಾಗಿತ್ತು.
ಬೇಲೂರು: ಮಕ್ಕಳಿಗೆ ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಭಾಗವಹಿಸುವ ಅವಕಾಶ ನೀಡಬೇಕು ಎಂದು ಬಿಇಒ ಭಾಗ್ಯಮ್ಮ ಸಲಹೆ ನೀಡಿದ್ದಾರೆ.
ಬೇಲೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರೌಢಶಾಲಾ ಮಕ್ಕಳಿಗಾಗಿ ಜಾನಪದ ಹಾಗೂ ಭಾವಗೀತೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಇಒ ಭಾಗ್ಯಮ್ಮ, ವಿದ್ಯಾರ್ಥಿಗಳು ವೇದಿಕೆ ಭಯವನ್ನು ಬದಿಗಿಟ್ಟು ಧೈರ್ಯದಿಂದ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಹೇಳಿದರು.
ಕರವೇ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ ಮತ್ತು ಕ್ರೀಡೆಯಲ್ಲೂ ಮಕ್ಕಳು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕರವೇ ಪದಾಧಿಕಾರಿಗಳು, ತೀರ್ಪುಗಾರರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.