ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಹೊರವಲಯದಲ್ಲಿ ಆಟೋ-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಾಯಿ ಶರಣಮ್ಮ (30) ಹಾಗೂ 3 ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದೆ.

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.


ವಾಡಿ ಪಟ್ಟಣಕ್ಕೆ ಆಗಮಿಸುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಶರಣಮ್ಮ (30) ಹಾಗೂ ಆಕೆಯ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಅಪಘಾತದಲ್ಲಿ ಶರಣಮ್ಮ ಅವರ ಅತ್ತೆ ಸಾಬಮ್ಮ ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.