Kalaburagi ಹೀರಾಪುರ ರಸ್ತೆಯ ಫ್ಲೈಓವರ್ನಲ್ಲಿ ಗಣೇಶನ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ಗಳು ಟಚ್ ಆಗಿ ಅಪಘಾತ ಸಂಭವಿಸಿದೆ.
Kalaburagi : ಗಣೇಶನ ಮೂರ್ತಿ ತರಲು ಸ್ನೇಹಿತರೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈಓವರ್ನಲ್ಲಿ ನಡೆದಿದೆ.
ಮೃತ ಯುವಕನನ್ನು ಕೊಟನೂರು ಬಡಾವಣೆಯ 23 ವರ್ಷದ ಪ್ರಶಾಂತ್ ಬಿರಾದರ್ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಪ್ರಶಾಂತ್ ಬಿರಾದರ್ ಅವರು ಸ್ನೇಹಿತರೊಂದಿಗೆ ಗಣೇಶನ ಮೂರ್ತಿ ತರಲು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬೈಕ್ ಟಚ್ ಆಗಿದ್ದು, ಇಬ್ಬರು ಸವಾರರು ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ.
ಅಪಘಾತದಲ್ಲಿ ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಪ್ರಶಾಂತ್ ಬಿರಾದರ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮತ್ತೊಬ್ಬ ಗಾಯಾಳುವಿನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.