Kalaburagi ಜಿಲ್ಲೆಯ ಚಿಂಚೋಳಿಯಲ್ಲಿ ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ನಡೆದು 30 ವರ್ಷದ ಪ್ರಿಯಾಂಕಾ ಹಡಪದ್ ಮೃತಪಟ್ಟಿದ್ದಾರೆ.
ಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ನಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು 30 ವರ್ಷದ ಪ್ರಿಯಾಂಕಾ ಹಡಪದ್ ಎಂದು ಗುರುತಿಸಲಾಗಿದೆ. ಪತಿ ಸೂರ್ಯಕಾಂತ್ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವ ವಿಚಾರದಲ್ಲಿ ಪತ್ನಿಗೆ ಕಿರುಕುಳ ನೀಡುತ್ತಿದ್ದರು ಎಂದು ಪ್ರಿಯಾಂಕಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸೂರ್ಯಕಾಂತ್ ಪತ್ನಿಯ ಮೇಲೆ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ. ಬಳಿಕ ಘಟನೆ ಆತ್ಮಹತ್ಯೆಯಂತೆ ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕುಟುಂಬಸ್ಥರ ದೂರಿನ ಆಧಾರದ ಮೇಲೆ ಸೂರ್ಯಕಾಂತ್ನನ್ನು ವಶಕ್ಕೆ ಪಡೆದಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.