ಕಲಬುರಗಿ ನಗರದ ಶರಣಸಿರಸಗಿ ಬಳಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಕಲಬುರಗಿ: ನಗರದ ಶರಣಸಿರಸಗಿ ಬಳಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ರೇಣುಕಾ ಶಿಂಧೆ (38) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ರೇಣುಕಾ ಅವರು ಕೆಲ ವರ್ಷಗಳ ಹಿಂದೆ ಸಂಜಯ್ ಎಂಬುವವರನ್ನು ವಿವಾಹವಾಗಿದ್ದು, ಶರಣಸಿರಸಗಿ ಬಳಿ ವಾಸವಾಗಿದ್ದರು ಎನ್ನಲಾಗಿದೆ. ಪತ್ನಿಯ ವೈಯಕ್ತಿಕ ಸಂಬಂಧದ ಬಗ್ಗೆ ಸಂಜಯ್ ಶಂಕೆ ವ್ಯಕ್ತಪಡಿಸುತ್ತಿದ್ದ ಹಾಗೂ ಇದೇ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ರೇಣುಕಾ ಅವರ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ಪತಿ ಸಂಜಯ್ ವಿರುದ್ಧ ಕೇಳಿಬಂದಿದೆ.
ಘಟನೆ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.