ಕರ್ನಾಟಕದಲ್ಲಿ ಸೆ.22ರಿಂದ 24ರವರೆಗೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.

 ರಾಜ್ಯದಲ್ಲಿ ಮುಂದಿನ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಸೆ.22ರಿಂದ 24ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಸಾಧ್ಯತೆ ಇದೆ.


ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಸೆ.23ರಂದು ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದಲ್ಲಿ ಸೆ.24ರಂದು ಭಾರೀ ಮಳೆಯ ಸಾಧ್ಯತೆ ಇದೆ..


ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮುಂದಿನ ದಿನಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ. ಬೆಂಗಳೂರಿನ ನಗರ ಪ್ರದೇಶಕ್ಕೆ ಸೆ.23 ಮತ್ತು 24ರಂದು ಗುಡುಗು-ಮಿಂಚು ಹಾಗೂ ಗಾಳಿಯ ಮುನ್ಸೂಚನೆಯನ್ನು IMD ನೀಡಿದೆ.


ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆಯ ವಾತಾವರಣ ಕಂಡುಬಂದಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಸೆ.26ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.