Karnataka Weather : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 13ರಂದು ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka Weather : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಅಕ್ಟೋಬರ್ 13) ಒಣ ಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಬಳ್ಳಾರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆ ಎಂದು ಮುನ್ಸೂಚನೆ ತಿಳಿಸಿದೆ.
ಅಕ್ಟೋಬರ್ 14ರಂದು ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಇನ್ನು ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ವಿಜಯನಗರ ಜಿಲ್ಲೆಯ ಹೊಸಹಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಸೆಂ.ಮೀ. ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.