ಕರ್ನಾಟಕದಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂದಿನ ಐದು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ಬೀದರ್, ಗದಗ, ಹಾಸನ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ದಿನಗಳಲ್ಲಿ ಮಳೆಯ ಜೊತೆಗೆ ಹವಾಮಾನದಲ್ಲಿ ಮತ್ತಷ್ಟು ಬದಲಾವಣೆ ಕಂಡುಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.