ಬೆಂಗಳೂರು ಸೇರಿದಂತೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ, ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಒಟ್ಟು 19 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಕೊಪ್ಪಳ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ಮೂರು ಗಂಟೆಗಳಲ್ಲಿ ಕೆಲವೆಡೆ ಬಿರುಗಾಳಿ, ಗುಡುಗು ಹಾಗೂ ಧಾರಾಕಾರ ಮಳೆ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.