ಕರ್ನಾಟಕದಲ್ಲಿ ಮಳೆ ಕೊರತೆಯಿಂದ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ನಲ್ಲಿ ಬೇಸಿಗೆಯಂತಹ ಬಿಸಿಲು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 36°C ಹಾಗೂ ಬೆಂಗಳೂರಿನಲ್ಲಿ 32°C ತಾಪಮಾನ ದಾಖಲಾಗಿದೆ.
karnataka weather : ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗುತ್ತಿದ್ದು, ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲಿನ ವಾತಾವರಣ ನಿರ್ಮಾಣವಾಗಿದೆ.
ಸೆಪ್ಟೆಂಬರ್ ತಿಂಗಳಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಮಳೆ ಕೊರತೆ ಹಾಗೂ ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದೆ ಎನ್ನಲಾಗಿದೆ.
ಈಗಾಗಲೇ ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಸಾಮಾನ್ಯವಾಗಿ ಬೇಸಿಗೆ ಅವಧಿಯಲ್ಲಿ ಕಂಡುಬರುವಂತಹ ಬಿಸಿಲಿನ ತೀವ್ರತೆ ಇದೀಗ ಮಳೆಗಾಲದಲ್ಲೇ ಕಾಣಿಸಿಕೊಳ್ಳುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಒಂದೆಡೆ ಮಳೆ ಕೊರತೆ, ಮತ್ತೊಂದೆಡೆ ಹೆಚ್ಚುತ್ತಿರುವ ತಾಪಮಾನದಿಂದ ರೈತರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿರಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.