ಬೆಂಗಳೂರಿನಲ್ಲಿ ಸಂಜೆ ಸುರಿದ ಧಾರಾಕಾರ ಮಳೆಗೆ ಹಲವು ಪ್ರಮುಖ ರಸ್ತೆಗಳು ಹಾಗೂ ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ.

ಬೆಂಗಳೂರು: ರಾಜಧಾನಿಯಲ್ಲಿ ಸಂಜೆ ವೇಳೆಗೆ ವರುಣ ಅಬ್ಬರಿಸಿದ್ದು, ನಗರದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಭಾರಿ ಮಳೆಗೆ ಶೇಷಾದ್ರಿಪುರಂ ಸೇರಿದಂತೆ ಹಲವು ಪ್ರಮುಖ ರಸ್ತೆಗಳು ಹಾಗೂ ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.


ಗೊರಗುಂಟೆಪಾಳ್ಯ, ಎಂಟನೇ ಮೈಲಿ, ದಾಸರಹಳ್ಳಿ, ರಾಜಾಜಿನಗರ, ಹೆಬ್ಬಾಳ, ಎಂ.ಜಿ. ರಸ್ತೆ, ಜಕ್ಕೂರು, ಶಿವಾಜಿನಗರ ಹಾಗೂ ಕೆ.ಆರ್. ಪುರಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಸ್ತೆಗಳ ಮೇಲೆ ನೀರು ನಿಂತಿದೆ.


ಇನ್ನು ಸಂಜೆ ಪೀಕ್ ಅವರ್‌ನಲ್ಲೇ ಮಳೆ ಸುರಿದ ಪರಿಣಾಮ ಹೆಬ್ಬಾಳ ಫ್ಲೈಓವರ್, ಗೊರಗುಂಟೆಪಾಳ್ಯ ಜಂಕ್ಷನ್ ಹಾಗೂ ಎಂ.ಜಿ. ರಸ್ತೆಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.



ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.