kolar : ಚೆನ್ನೈ–ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ವೊಂದು ಪಲ್ಟಿಯಾಗಿ ರಸ್ತೆ ತುಂಬಾ ಈರುಳ್ಳಿ, ಬೆಳ್ಳುಳ್ಳಿ ಚೆಲ್ಲಾಡಿದ ಘಟನೆ ಕೆಜಿಎಫ್ನ ವಡ್ಡರಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನಿಂದ ಚಿತ್ತೂರಿಗೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಾಗಿಸುತ್ತಿದ್ದ ವೇಳೆ ಕ್ಯಾಂಟರ್ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಬೇತಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಮೇಲೆ ಬಿದ್ದಿದ್ದ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಕೆಲವರು ಕಳವು ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟು ಭದ್ರತೆ ಕೈಗೊಂಡಿದ್ದಾರೆ.
ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.