Koppal ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಪರ್ವತಕ್ಕೆ ಸಂಸದ ಯದುವೀರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. 575 ಮೆಟ್ಟಿಲೇರಿ ಆಂಜನೇಯನ ದರ್ಶನ ಪಡೆದರು.
Koppal : ಕೊಪ್ಪಳ: ಹನುಮ ಹುಟ್ಟಿದ ನಾಡು ಎಂದು ಪ್ರಸಿದ್ಧವಾಗಿರುವ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಅಂಜನಾದ್ರಿ ಪರ್ವತಕ್ಕೆ ಸಂಸದ ಯದುವೀರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಪರ್ವತಕ್ಕೆ ಆಗಮಿಸಿದ ಯದುವೀರ್ ಅವರು, ಬೆಟ್ಟದ ಸುಮಾರು 575 ಮೆಟ್ಟಿಲುಗಳನ್ನು ಏರಿ ಆಂಜನೇಯನ ದರ್ಶನ ಪಡೆದರು.
ಬಳಿಕ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ನೆರವೇರಿಸಿದರು.
ಅಂಜನಾದ್ರಿಯ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ಹಿನ್ನೆಲೆಯಲ್ಲಿ ಯದುವೀರ್ ಅವರ ಭೇಟಿ ವೇಳೆ ಸ್ಥಳೀಯರು ಹಾಗೂ ಭಕ್ತರು ಉಪಸ್ಥಿತರಿದ್ದರು.