ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಟಾಟಾ ಏಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಬಂಡಿ ಹರ್ಲಾಪುರ ನಿವಾಸಿಗಳಾದ ಹುಲ್ಲೇಶ್ ವಾಲಿಕಾರ ಹಾಗೂ ಮಾರುತಿ ಎಂದು ಗುರುತಿಸಲಾಗಿದೆ. ಇಬ್ಬರೂ ಮುಕುಂದ್ ಸ್ಟೀಲ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು ಎನ್ನಲಾಗಿದೆ.


ಮಂಗಳವಾರ ರಾತ್ರಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಮಾಹಿತಿ ತಿಳಿದು ಮುನಿರಾಬಾದ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.