TUMKURನಲ್ಲಿ ಅದ್ಧೂರಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ | DCM ಪರಮೇಶ್ವರ್ರಿಂದ ಮೊದಲ ಪೂಜೆ
ಯೆಸ್, ಇಂದು ಎಲ್ಲೆಡೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗ್ತಿದೆ. ಗಣೇಶ ಹಬ್ಬದ ಹಿನ್ನೆಲೆ ಮನೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಲಾಗ್ತಿದೆ. ಇತ್ತ ತುಮಕೂರು ನಗರದ ನಾಗರಕಟ್ಟೆ ಹಿಂದೂ ಮಹಾಗಣಪತಿಯ 9ನೇ ವರ್ಷದ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗ್ತಿದೆ. ಟೌನ್ಹಾಲ್ನಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಡಿಸಿಎಂ ಪರಮೇಶ್ವರ್ ಅವರು ವಿಘ್ನ ನಿವಾರಕನಿಗೆ ಆರತಿ ಬೆಳಗಿಸಿ ಮೊದಲ ಪೂಜೆ ನೆರವೇರಿಸಿದ್ರು.
ತುಮಕೂರು ನಗರದ ಟೌನ್ಹಾಲ್ನಲ್ಲಿ ಇಂದು ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಇಂದಿನಿಂದ 18 ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಹಲವು ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 3ರಂದು ಹಿಂದೂ ಮಹಾಗಣಪತಿಯ ಅದ್ಧೂರಿ ವಿಸರ್ಜನಾ ಮಹೋತ್ಸವ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮಂಜು ಭಾರ್ಗವ್, ಶಕುಂತಲಾ ನಟರಾಜ್ ಸೇರಿದಂತೆ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಇನ್ನು ಪ್ರತಿ ವರ್ಷ ವಿಭಿನ್ನ ರೀತಿಯಲ್ಲಿ ಹಿಂದೂ ಮಹಾಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗ್ತಿದ್ದು, ಈ ಬಾರಿಯೂ ವಿಶೇಷವಾಗಿ ಗಣೇಶೋತ್ಸವವನ್ನು ಆಯೋಜಿಸಲಾಗಿದೆ. ಪ್ರತಿಷ್ಠಾಪನೆಯ ಬಳಿಕ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಹಿಂದೂ ಮಹಾಗಣಪತಿಯ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಆಗಮಿಸಿದ ಭಕ್ತರಿಗೆ ಪ್ರಸಾದ ವಿನಿಯೋಗವೂ ಮಾಡಲಾಯಿತು.