Davanagere ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ಮಹಿಳೆಯೊಬ್ಬಳು ಮದ್ಯದ ಅಮಲಿನಲ್ಲಿ ಪ್ರಿಯಕರನನ್ನು ಸೀರೆಯಿಂದ ಕತ್ತು ಬಿಗಿದು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ.
ದಾವಣಗೆರೆ: ಮದ್ಯದ ಅಮಲಿನಲ್ಲಿ ಮಹಿಳೆಯೊಬ್ಬಳು ಪ್ರಿಯಕರನಿಗೆ ಸೀರೆಯಿಂದ ಕತ್ತು ಬಿಗಿದು ಹತ್ಯೆ ಮಾಡಿದ ಆರೋಪ ಕೇಳಿಬಂದಿರುವ ಘಟನೆ ದಾವಣಗೆರೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು 40 ವರ್ಷದ ಮಂಜಪ್ಪ ಎಂದು ಗುರುತಿಸಲಾಗಿದೆ. ಕೊಲೆ ಆರೋಪ ಎದುರಿಸುತ್ತಿರುವ ಮಹಿಳೆಯನ್ನು 38 ವರ್ಷದ ಶಬೀನಾ ಎಂದು ಗುರುತಿಸಲಾಗಿದೆ.
ಮಂಜಪ್ಪ ಅವರು ಪತ್ನಿ ಹಾಗೂ ಮಕ್ಕಳಿಂದ ದೂರವಿದ್ದು, ಕಳೆದ ಆರು ವರ್ಷಗಳಿಂದ ವಿಚ್ಛೇದಿತ ಮಹಿಳೆ ಶಬೀನಾ ಜೊತೆ ವಾಸವಾಗಿದ್ದರು ಎಂದು ತಿಳಿದುಬಂದಿದೆ.
ಮದ್ಯ ಸೇವಿಸಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಶಬೀನಾ ಸೀರೆಯಿಂದ ಮಂಜಪ್ಪನ ಕತ್ತು ಬಿಗಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಮಹಿಳೆ ಶಬೀನಾಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಘಟನೆಗೆ ನಿಖರ ಕಾರಣ ಹಾಗೂ ಇತರ ಅಂಶಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.