ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದೆ. 

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಪ್ರದೀಪ್ ಈಶ್ವರ್ ಹಾಗೂ ಪತ್ನಿ ನಯನ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಶಾಸಕರು ತಂದೆಯಾಗಿದ್ದಾರೆ.

ಈ ಸಂತಸದ ಸುದ್ದಿಯನ್ನು ಪ್ರದೀಪ್ ಈಶ್ವರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ನವಜಾತ ಹೆಣ್ಣು ಮಗುವನ್ನು ಕೈಯಲ್ಲಿ ಎತ್ತಿಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿ, ತಮ್ಮ ಸಂತಸವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ತಾಯಿ ನಯನ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳು ದಂಪತಿಗೆ ಶುಭಾಶಯಗಳನ್ನು ಸಲ್ಲಿಸುತ್ತಿದ್ದಾರೆ.