Mandya ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿ ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 


ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ.

ಮೃತರನ್ನು ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಹಾಗೂ ಕೀರ್ತನಾ ಎಂದು ಗುರುತಿಸಲಾಗಿದೆ.


ಗಣೇಶ ಹಬ್ಬ ಮುಗಿಸಿ ಈ ಮೂವರು ಮುಂಜಾನೆ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಕೊಪ್ಪದ ಬಳಿ ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನಲ್ಲಿದ್ದ ಮೂವರ ಮೇಲೆಯೇ ಟ್ಯಾಂಕರ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.