Mysuru : ಮೈಸೂರು ದಸರಾ ವೇಳೆ 9 ವರ್ಷದ ಬಲೂನ್ ಮಾರಾಟ ಮಾಡುತ್ತಿದ್ದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ಮೈಸೂರಿನ ತ್ವರಿತಗತಿ ನ್ಯಾಯಾಲಯ ಮರಣದಂಡನೆ ವಿಧಿಸಿದೆ
Mysuru : ದಸರಾ ಸಂದರ್ಭದಲ್ಲಿ ನಡೆದಿದ್ದ 9 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ಮೈಸೂರಿನ ತ್ವರಿತಗತಿ ನ್ಯಾಯಾಲಯ ಮರಣದಂಡನೆ ವಿಧಿಸಿದೆ ಎಂದು ವರದಿಯಾಗಿದೆ.
ಕಳೆದ ವರ್ಷ ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ಕಲಬುರಗಿಯಿಂದ ಕುಟುಂಬವೊಂದು ಮೈಸೂರಿಗೆ ಬಂದಿತ್ತು. ಈ ವೇಳೆ ಬಾಲಕಿ ನಾಪತ್ತೆಯಾಗಿದ್ದು, ಬಳಿಕ ಆಕೆಯ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು.
ಪ್ರಕರಣದ ತನಿಖೆ ನಡೆಸಿದ ನಜರಬಾದ್ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಗಳ ಒಳಗೆ ಕಾರ್ತಿಕ್‌ನನ್ನು ಬಂಧಿಸಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ FTSC-1 ನ್ಯಾಯಾಲಯವು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜಯಂತಿ ವಾದ ಮಂಡಿಸಿದ್ದರು ಎಂದು ವರದಿಯಾಗಿದೆ.