Mysuru : ವರುಣ ಕ್ಷೇತ್ರಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ರಾಜಕೀಯ ಬದುಕಿನಲ್ಲಿ ಕ್ಷೇತ್ರದ ಜನರು ನೀಡಿದ ಬೆಂಬಲವನ್ನು ಸ್ಮರಿಸಿದರು.
Mysuru : ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತಮ್ಮ ತವರು ಕ್ಷೇತ್ರ ವರುಣಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ತಮ್ಮ ರಾಜಕೀಯ ಬದುಕಿನಲ್ಲಿ ವರುಣ ಕ್ಷೇತ್ರದ ಜನರು ನೀಡಿದ ಬೆಂಬಲವನ್ನು ಸ್ಮರಿಸಿದರು. ವರುಣ ಕ್ಷೇತ್ರದ ಜನರ ಆಶೀರ್ವಾದದಿಂದಲೇ ತಾವು ಹಲವು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು ಎಂದು ಹೇಳಿದರು.
ಶಾಸಕನಾಗಿರಲಿ ಅಥವಾ ಇಲ್ಲದಿರಲಿ, ವರುಣ ಕ್ಷೇತ್ರದ ಜನರ ಸೇವೆಯನ್ನು ಮುಂದುವರಿಸುವುದಾಗಿ ತಿಳಿಸಿದ ಸಿದ್ದರಾಮಯ್ಯ, “ನನಗೆ ನೀವು ಆಶೀರ್ವಾದ ನೀಡಿದಂತೆ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಆಶೀರ್ವಾದ ನೀಡಬೇಕು” ಎಂದು ಮನವಿ ಮಾಡಿದರು.
ಇದೇ ವೇಳೆ 2028ರ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಆದರೆ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ತಮ್ಮ ಭಾಷಣ ಮುಗಿಸಿದರು.