ಈರುಳ್ಳಿ ಬೆಲೆ ₹65-₹75ಕ್ಕೆ ಏರಿರುವ ನಡುವೆ ಬೆಂಗಳೂರಿನಲ್ಲಿ ಕೆಜಿಗೆ ₹35ರಂತೆ ಈರುಳ್ಳಿ ಮಾರಾಟವಾಗುತ್ತಿದೆ. 

ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿತ್ತು. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ ₹65ರಿಂದ ₹75ರಷ್ಟಿರುವ ನಡುವೆಯೇ ಬೆಂಗಳೂರಿನ ಈರುಳ್ಳಿ ಪ್ರಿಯರಿಗೆ ಇದೀಗ ಗುಡ್‌ನ್ಯೂಸ್ ಸಿಕ್ಕಿದೆ.


ಕೇಂದ್ರ ಸರ್ಕಾರದ ವತಿಯಿಂದ NAFED ಮೂಲಕ ಬೆಂಗಳೂರಿಗೆ ಈರುಳ್ಳಿ ಪೂರೈಕೆ ಮಾಡಲಾಗಿದ್ದು, ಅಗ್ಗದ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಕೆಜಿಗೆ ಕೇವಲ ₹35ರಂತೆ ಈರುಳ್ಳಿ ಮಾರಾಟವಾಗುತ್ತಿರುವುದರಿಂದ ಗ್ರಾಹಕರು ಖರೀದಿಗೆ ಮುಗಿಬಿದ್ದಿದ್ದಾರೆ.


ಬೆಂಗಳೂರಿನ ವಿವಿಧ ಭಾಗಗಳಲ್ಲಿ NAFED ವಾಹನಗಳ ಮೂಲಕ ಜನರಿಗೆ ಕಡಿಮೆ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಈರುಳ್ಳಿ ಸಿಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಾಮಾನ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ₹65ರಿಂದ ₹75ರ ನಡುವೆ ಇದ್ದರೆ, NAFED ಮೂಲಕ ₹35ಕ್ಕೆ ಈರುಳ್ಳಿ ದೊರೆಯುತ್ತಿರುವುದು ಗ್ರಾಹಕರಿಗೆ ದೊಡ್ಡ ಮಟ್ಟದ ರಿಲೀಫ್ ನೀಡಿದೆ.


ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಅಗ್ಗದ ದರದಲ್ಲಿ ಈರುಳ್ಳಿ ಸಿಗುತ್ತಿರುವುದು ಸಂತಸ ತಂದಿದೆ. ಬೆಂಗಳೂರಿನ ಇನ್ನಷ್ಟು ಪ್ರದೇಶಗಳಲ್ಲಿ ಈ ಮಾರಾಟವನ್ನು ವಿಸ್ತರಿಸಲಾಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.